ಮೋದಿ ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು,ಅವರು ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸಿದ್ಧತೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು.

ರಾಜ್ಯ ಸರ್ಕಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಐಟಿ, ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ರೈಲ್ವೆ ಮಂಡಳಿಯ ಅಧಿಕಾರಿಗಳು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.