ಬೆಂಗಳೂರು: ಭರವಸೆ, ಭವಿಷ್ಯವಿಲ್ಲದ ಕಾಂಗ್ರೆಸ್ ಗೆ ನಮ್ಮ ಪಕ್ಷ ತೊರೆದು ಯಾರು ಹೋಗುವುದಿಲ್ಲ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು ಖಂಡಿತಾ ಕಾಂಗ್ರೆಸ್ ಪಕ್ಷಕ್ಕೆ ಯಾರೂ ಹೋಗಲಾರರು ಎಂದು ಹೇಳಿದರು.
ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದು ಸಚಿವರಾಗಿರುವವರು ಸೇರಿದಂತೆ ಎಲ್ಲರಿಗೂ ಕಾಂಗ್ರೆಸ್ ಸೇರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನ ನೀಡಿದ್ದಾರಲ್ಲ ಎಂಬ ಭವಿಷ್ಯವಿಲ್ಲದ ಪಕ್ಷಕ್ಕೆ ಯಾರು ಹೋಗುತ್ತಾರೆ ಎಂದು ಮರು ಪ್ರಶ್ನಿಸಿದರು.
ಹಗರಣದ ತನಿಖೆ ಕುರಿತು ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದಾರಲ್ಲ ಎಂಬ ಪ್ರಶ್ನೆಗೆ, ಶಿವಕುಮಾರ್ ಭ್ರಷ್ಟಾಚಾರದ ಬ್ರಾಂಡ್ ಎಂದು ವ್ಯಂಗ್ಯವಾಡಿದರು.
ಡಿಕೆ ಅಂದರೆ ಏನು ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ ಮಹಾಪುರಷ ಎಂದು ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದರು.

