ಚಿಕ್ಕಮಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹಳದಿ ಕಣ್ಣು ಅದಕ್ಕೆ ನಮ್ಮ ಪಕ್ಷದ ಬಗ್ಗೆ ಏನೇನೊ ಮಾತನಾಡುತ್ತಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಮಾತನಾಡಿದರು.
ನಮ್ಮ ಜನಸಂಕಲ್ಪ ಯಾತ್ರೆಗೆ ಜನ ಸೇರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಸಂಕಲ್ಪ ಯಾತ್ರೆಗೆ ಲಕ್ಷಾಂತರ ಜನ ಸೇರಿದ್ದಾರೆ ಎಂದು ತಿಳಿಸಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲ.ರಾಜ್ಯದಲ್ಲಿ ಡಿಕೆಶಿ ಬಣ,ಸಿದ್ದು ಬಣ ಹೀಗೆ ನಾನಾ ಬಣಗಳಿವೆ.ಅವರವರೆ ಕಾಲೆಳೆದುಕೊಂಡು ಕಡೆಗೆ ಹೀನಾಯ ಸ್ಥಿತಿಗೆ ತಲುಪುತ್ತಾರೆ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕ ಸ್ಥಾನ ಗೆದ್ದು ಅಧಿಕಾರ ಹಿಡಿಯಲಿದೆ.ಅದಕ್ಕೆ ಈಗಿನಿಂದಲೇ ತಯಾರಿ ನಡೆಯಬೇಕೆಂದು ಕಾರ್ಯಕರ್ತರಿಗೆ ಬೊಮ್ಮಾಯಿ ಕರೆ ನೀಡಿದರು.

