ತನ್ವೀರ್ ಸೇಠ್ ಗೆ ಜೀವ ಬೆದರಿಕೆ: ಉದಯಗಿರಿ ಠಾಣೆಯಲ್ಲಿ ದೂರು ದಾಖಲು

ಮೈಸೂರು: ಶಾಸಕ ತನ್ವೀರ್ ಸೇಠ್ ಗೆ ಜೀವಬೆದರಿಕೆ ಬಂದಿರುವ ಸಂಬಂಧ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಾಸನ ಜಿಲ್ಲೆ ಸಕಲೇಶಪುರದ ನಿವಾಸಿ ರಘು ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ವೀರ್ ಸೇಠ್ ಗೆ ಜೀವ ಬೆದರಿಕೆ ಒಡ್ಡಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ.

ಟಿಪ್ಪು ಸುಲ್ತಾನ್ ಪ್ರತಿಮೆ ಅನಾವರಣ ಮಾಡುವ ಬಗ್ಗೆ ತನ್ವೀರ್ ಸೇಠ್ ನೀಡಿದ ಹೇಳಿಕೆಯನ್ನ ಉಲ್ಲೇಖಿಸಿರುವ ವ್ಯಕ್ತಿ ಕೂಡಲೇ ಹಿಂದೂ ಸಮಾಜದ ಮುಂದೆ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾನೆ.

ಇಲ್ಲದಿದ್ದಲ್ಲಿ 6×3 ಅಡಿ ಫಿಕ್ಸ್ ಎಂದು ಬೆದರಿಕೆ ಹಾಕಿದ್ದಾನೆಂದು ದೂರಲಾಗಿದೆ.

ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹಾಗೂ ಅಲ್ಪಸಂಖ್ಯಾತರ ಮನಸ್ಸಿಗೆ ನೋವಾಗುವಂತೆ ನಡೆದುಕೊಂಡಿರುವ ರಘು ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಈ‌ ಸಂಬಂಧ ಮೈಸೂರು ಬೀಡಿ ಮಜ್ದೂರ್ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಸಿ.ಶೌಕತ್ ಪಾಷ  ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.