ಪ್ರೀತಂ ಗೌಡರಿಗೆ ಯಡಿಯೂರಪ್ಪ ಸರ್ಕಾರ ಸರ್ವ ಶಕ್ತಿ ಕೊಟ್ಟಿದೆ; ದೇವೇಗೌಡರ ವ್ಯಂಗ್ಯ

ಮೈಸೂರು: ಶಾಸಕ ಪ್ರೀತಂ ಗೌಡನಿಗೆ ಯಡಿಯೂರಪ್ಪ ಸರ್ಕಾರ ಸರ್ವ ಶಕ್ತಿ ಕೊಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದರು

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರೀತಂ ಗೌಡರಿಗೆ ಯಾವ್ಯವ ಕೆಲಸ ಕೊಟ್ಟಿದ್ದಾರೆ ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ ಎಂಬುದು ಗೊತ್ತಿದೆ ಎಂದು ಟಾಂಗ್ ನೀಡಿದರು.

ಪ್ರೀತಂಗೌಡರಿಗೆ  ಶಕ್ತಿ ಎಷ್ಟಿದೆ ಅದಕ್ಕೆ ಮೂಲತಹ ಯಡಿಯೂರಪ್ಪ ಹಾಗೂ ಅವರೇ ಮಕ್ಕಳೇ ಕಾರಣ,

ಅವರ ಹೆದರಿಕೆಗೆ ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.

ಹಾಸನಕ್ಕೆ ಬಹಳ ಜನ ಆಕಾಂಕ್ಷಿಗಳಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣ ಒಟ್ಟಾಗಿ ಕೂತು ಮಾತನಾಡಿ ಅದನ್ನು ಅಂತಿಮ ಮಾಡುತ್ತಾರೆ,ಯಾರು ಮುಖ್ಯಮಂತ್ರಿ ಆಗಬೇಕೆಂಬುದನ್ನ ಜನ ತೀರ್ಮಾನಿಸುತ್ತಾರೆ ಎಂದು ಗೌಡರು ತಿಳಿಸಿದರು.

ಮುಂದಿನ ತಿಂಗಳಿನಿಂದ  ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಗುರಿ ಇದೆ ಹಾಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ನಾನು ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಪಂಚ ರತ್ನ ಯಾತ್ರೆ ಮಾಡುತ್ತಿದ್ದಾರೆ.

ಪ್ರತಿ ಹಳ್ಳಿಯಲ್ಲಿ ನಮ್ಮ ಪಕ್ಷದ ಶಾಸಕರು ಮುಖಂಡರು, ಮಾಜಿ ಶಾಸಕರು ಒಬಬ್ಬೊರಿಗೂ ಒಂದೊಂದು ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಹೇಳಿದರು.

ಮನೆ ಮನೆಗೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಜೆಡಿಎಸ್ ಮೊದಲ ಪಟ್ಟಿ ಶಾಶ್ವತ ಅಲ್ಲ ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತಿರುತ್ತದೆ, ಶಿವಲಿಂಗೇಗೌಡರು ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದ್ವಂದ ಇದೆ, ಇನ್ನೂ ಸಮಸ್ಯೆ ಬಗೆ ಹರಿದಿಲ್ಲ ಎಂದು ಗೌಡರು ತಿಳಿಸಿದರು.