ಮೈಸೂರು: ಪೌರಾಣಿಕ, ಧಾರ್ಮಿಕ ಕತೆಗಳ ಆಧಾರಿತ ಸಿನಿಮಾ ನೋಡುತ್ತಿದ್ದ ಪ್ರೇಕ್ಷಕರನ್ನ ಸಾಮಾಜಿಕ ಚಿತ್ರಗಳ ಕಡೆ ವಾಲುವಂತೆ ಮಾಡಿದವರು ಪುಟ್ಟಣ್ಣ ಕಣಗಾಲ್ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಹೇಳಿದರು.
ಕನ್ನಡ ಚಿತ್ರರಂಗದ ಬ್ರಹ್ಮ ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಿರ್ದೇಶಕ ಎಸ್.ಆರ್ ಪುಟ್ಟಣ್ಣ ಕಣಗಾಲ್ ರವರ 89ನೇ ಜನ್ಮದಿನೋತ್ಸವ ಅಂಗವಾಗಿ ಏರ್ಪಡಿಸಿದ್ದ ಚಿತ್ರ ಬ್ರಹ್ಮನ ನೆನಪು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಾಗೂ ಪುಟ್ಟಣ್ಣ ಕಣಗಾಲ್ ಅಭಿಮಾನಿ ಬಳಗ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರ ರಾವ್ ಉದ್ಯಾನವನದಲ್ಲಿ ಈ ಕಾರ್ಯಕ್ರಮ ಆಯೋಜಿಸಿತ್ತು.
ಪುಟ್ಟಣ್ಗೌಡ,ರು ಅಂದು ಬಿ.ಆರ್. ಪಂತಲು ಅವರ ಬಳಿ ಮೆಕ್ಯಾನಿಕ್ ಕಮ್ ಡೈರೆಕ್ಟರ್ ಆಗಿ ಕೆಲಸಕ್ಕೆ ಸೇರಿ ನಂತರ ಡೈಲಾಗ್ ಡೆಲಿವೆರಿ ಸಹನಿರ್ದೇಶಕನಾಗಿ ಮುಂದುವರೆದರು.
ಇಡೀ ದೇಶವೇ ಚಪ್ಪಾಳೆ ತಟ್ಟುವ ಹಾಗೇ ಮಾಡಿ ಅತ್ಯುತ್ತಮ ಚಿತ್ರನಿರ್ದೇಶಕರಾಗಿ ಬೆಳೆದು ನಿಂತರು.
ಕಣಗಾಲ್ ಪ್ರಭಾಕರ್ ಶಾಸ್ತ್ರಿ ಮತ್ತು ಪುಟ್ಟಣ್ಣ ಕಣಗಾಲ್ ಎಂದರೆ ಡಾ. ರಾಜಕುಮರ್ ರವರಿಗೆ ಎಲ್ಲಿಲ್ಲದ ಪ್ರೀತಿ. ಗುರುಗಳ ಸ್ಥಾನದಲ್ಲಿ ಭಕ್ತಿಯಿಂದ ಕಾಣುತ್ತಿದ್ದರು ಎಂದು ಸ್ಮರಿಸಿದತು.
ಪುಟ್ಟಣ್ಣ ನವರ ಗರಡಿಯಲ್ಲಿ ಬೆಳೆದ ಅನೇಕರು ಕಿಂಗ್ ಆಗಿ ಚಿತ್ರರಂಗದಲ್ಲಿ ಮುನ್ನಡೆದರು ಆದರೆ ಕಿಂಗ್ ಮೇಕರ್ ಆದ ಪುಟ್ಟನವರನ್ನ ಇಂದಿಗೆ ಬಹುತೇಕರು ಮರೆತಿದ್ದಾರೆ ಎಂದು ಗೋಪಾಲ್ ಬೇಸರ ವ್ಯಕ್ತಪಡಿಸಿದರು.
ನಂತರ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ರವರು ಮಾತನಾಡಿ ಕಲಾವಿದರ ತವರೂರು ಮೈಸೂರು ಚಿತ್ರರಂಗಕ್ಷೇತ್ರದಲ್ಲಿ ಉತ್ತಂಗಕ್ಕೆ ಏರಲು ಪುಟ್ಟಣ್ಣ ಕಣಗಾಲ್ ರವರ ಪಾತ್ರ ಪ್ರಮುಖವಾದದು ಎಂದು ಹೇಳಿದರು.
ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೇ ಶ್ರೀನಿವಾಸ್ ಗೌಡ, ಯುವ ಮುಖಂಡ ಎನ್.ಎಮ್ ನವೀನ್ ಕುಮಾರ್,
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾನಂದೀಶ್ ,ಕಾಂಗ್ರೆಸ್ ಯುವ ಮುಖಂಡ ಎನ್. ಎಂ. ನವೀನ್ ಕುಮಾರ್, ನಗರಪಾಲಿಕೆ ಸದಸ್ಯರಾದ ಮ. ವಿ. ರಾಮಪ್ರಸಾದ್, ಕೆ. ಆರ್. ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ವಿನಯ್ ಕಣಗಾಲ್, ಅಜಯ್ ಶಾಸ್ತ್ರಿ, ಮಿರ್ಲೆ ಪನೀಶ್, ಎಸ್. ಎನ್. ರಾಜೇಶ್, ಚಾಮುಂಡೇಶ್ವರಿ ಯುವ ಬಳಗದ ಅಧ್ಯಕ್ಷರಾದ ರಾಕೇಶ್, ಯೋಗೇಶ್, ಸುಚೇಂದ್ರ, ಅಪೂರ್ವ ಸುರೇಶ್ ಇನ್ನಿತರರು ಹಾಜರಿದ್ದರು.

