ಪಿಎಫ್ಐ ಕಚೇರಿಗಳ ಮೇಲೆ ದಿಢೀರ್ ದಾಳಿ

ಬೆಂಗಳೂರು: ಕೇರಳ ಹಾಗೂ ಕರ್ನಾಟಕದಲ್ಲಿ  ಪಿಎಫ್ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ತಂಡ ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿದೆ.

ನಿಷೇಧಿತ ಪಿಎಫ್ ಸಂಘಟನೆ ಕಾರ್ಯಕರ್ತರು ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಎನ್ಐಎ ಅಧಿಕಾರಿಗಳು ಕೇರಳದ ಕೋಝಿಕ್ಕೋಡ್ ಜಿಲ್ಲೆ ಮತ್ತು ಕರ್ನಾಟಕದ ಕಲಬುರಗಿ ಜಿಲ್ಲೆಯ 03 ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿ  ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಷೇಧಿತ ಪಿ ಎಫ್ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ಭಯೋತ್ಪಾದನ ಕೃತ್ಯಕ್ಕೆ ಪ್ಲಾನ್ ಮಾಡುತ್ತಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ ಮತ್ತು ದೆಹಲಿ ಇತ್ಯಾದಿ ರಾಜ್ಯಗಳಲ್ಲಿ ಭಾರಿ ಪ್ರಮಾಣದ ಕೃತವೆಸಗಲು ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಚರಣೆ ನಡೆಸಲಾಗಿದೆ.

ಎಲ್ಲೆಲ್ಲಿ ಯಾವ ರೀತಿ ಭಯೋತ್ಪಾದಕ ಕೃತ್ಯ ಎಸಗಬೇಕು ಎಂಬ ಬಗ್ಗೆ ಪಿಎಫ್ ಸಂಘಟನೆ ಕಾರ್ಯಕರ್ತರಿಗೆ ಗುಪ್ತ ಸ್ಥಳಗಳಲ್ಲಿ ತರಬೇತಿ ನೀಡಲು ಶಿಬಿರಗಳನ್ನು ನಡೆಸಲಾಗುತ್ತಿತ್ತು ಎಂದು ಗೊತ್ತಾಗಿದೆ.

ದಾಳಿ ವೇಳೆ ಅಧಿಕಾರಿಗಳು ಡಿಜಿಟಲ್ ಸಲಕರಣೆಗಳು ಮತ್ತು ಕೆಲ ದಾಖಲೆಗಳನ್ನ ವಶಪಡಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ.