ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭದ ದಿನವೇ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ.
ಇದೇ ಸೋಮವಾರದಿಂದ ಸುವರ್ಣಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಮೊದಲದಿನವೇ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿತು.
ಸುವರ್ಣಸೌಧದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಫೋಟೊ ಅಳವಡಿಸಿದ್ದನ್ನು ವಿರೋಧಿಸಿ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸುವರ್ಣ ಸೌಧದ ಮೆಟ್ಟಿಲ ಬಳಿ ಪ್ರತಿಭಟನೆ ನಡೆಸಿದರು.
ಸುವರ್ಣ ಸೌಧದ ಮುಖ್ಯದ್ವಾರದ ಬಳಿ ಜಗಜ್ಯೋತಿ ಬಸವಣ್ಣ, ರಾಷ್ಟ್ರಕವಿ ಕುವೇಂಪು, ವಾಲ್ಮಿಕಿ ಅವರಂತಹ ಮಹಾನೀಯರ ಫೋಟೋ ಹಿಡಿದು ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು.
ಈ ವೇಳೆ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್ ಯು.ಟಿಖಾದರ್ ಸೇರಿ ಹಲವರು ನಾಯಕರು ಉಪಸ್ಥಿತರಿದ್ದರು.

