ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ; ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ -ಅಶೋಕ್

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಸುಮ್ಮನೆ ಆರೋಪ ಮಾಡಲಾಗುತ್ತಿದೆ.  ಡಿ.ಕೆ ಶಿವಕುಮಾರ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

ಈ ಹಿಂದೆ ಜನಾರ್ಧನ ರೆಡ್ಡಿ ಅವರು ಮನೆ ಮೇಲೆ ದಾಳಿಯಾಗಿತ್ತು ಆಗ ಯಾರ ಪ್ರೇರಣೆಯಿಂದ ಸಿಬಿಐ ದಾಳಿಯಾಗಿತ್ತು ಎಂದು ಪ್ರಶ್ನಿಸಿದರು.

ಸಿಬಿಐ ದಾಳಿಯಾಗಿದ್ದಕ್ಕೆ  ಪದೇ ಪದೇ ಬಿಜೆಪಿ ಮೇಲೆ ಟೀಕೆ ಮಾಡುತ್ತಿದ್ದಾರೆ.  ಸಿಬಿಐ ಸ್ವತಂತ್ರ ಸಂಸ್ಥೆ ಡಿ.ಕೆ. ಶಿವಕುಮಾರ್  ಆರೋಪ ಸರಿಯಲ್ಲ ಎಂದು ಅಶೋಕ್ ಕಿಡಿಕಾರಿದರು.