ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ -ಸಿಎಂ ಬೊಮ್ಮಾಯಿ

ಬೆಳಗಾವಿ: ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಇಂದು ಕೋವಿಡ್ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ ಎಂದವರು ತಿಳಿಸಿದರು.

ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ತಜ್ಞರ ಬಳಿಯೂ ಸಲಹೆ ಪಡೆಯುತ್ತೇನೆ. ಕೊರೊನಾ ಬಗ್ಗೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲೂ ಕೋವಿಡ್ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಲಿದ್ದಾರೆ.