ಮೈಸೂರು: ರಾಜ್ಯ ಸರ್ಕಾರ ಕೆ.ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದ ಮೂಲಕ ನಡೆಸುವಂತೆ ಆದೇಶ ಮಾಡಿರುವುದು ಶ್ಲಾಘನೀಯ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ನನ್ನ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೆ.ಸೆಟ್ ಪರೀಕ್ಷೆಯನ್ನು ಅಕ್ರಮವಾಗಿ ನಡೆಸುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೋಸ ಆಗಬಾರದು, ಅವರಿಗೆ ಆಧ್ಯತೆ ಸಿಗಬೇಕು ಎಂಬ ಉದ್ದೇಶದಿಂದ ಕೆ.ಸೆಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ತರಬೇಕೆಂದು ಯುಜಿಸಿ ಚೇರ್ಮನ್ ಜಗದೀಶ್ ಕುಮಾರ್ ಅವರಿಗೆ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರಿಗೂ ಪತ್ರದ ಮೂಲಕ ಮನವಿ ಮಾಡಿದ್ದರು.

