ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ನೂತನ ಗೈಡ್ ಲೈನ್ ಹೊರಡಿಸಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆ ನಂತರ ಕಂದಾಯ ಸಚಿವ ಆರ್.ಅಶೋಕ್, ಈ ಕುರಿತು ಮಾಹಿತಿ ನೀಡಿದರು.
ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಚರಣೆಗೆ ಅವಕಾಶ ನೀಡಲಾಗಿದೆ. 1 ಗಂಟೆ ನಂತರ ಹೊಸವರ್ಷಾಚರಣೆಗೆ ಅವಕಾಶವಿಲ್ಲ. ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯ. ಆದರೆ ದಂಡ ಪ್ರಯೋಗವಿಲ್ಲ. ರೆಸ್ಟೋರೆಂಟ್, ರೆಸಾರ್ಟ್, ಬಾರ್ ಗಳಿಗೂ ಈ ನಿಯಮ ಅನ್ವಯವಾಗಲಿದೆ. ಹೋಟೆಲ್ ಮಾಲೀಕರು ಸಿಬ್ಬಂದಿ ಸಪ್ಲೈಯರ್ ಗಳು ಎರಡು ಡೋಸ್ ಲಸಿಕೆ ಪಡೆದಿರಬೇಕು ಎಂದು ಅವರು ತಿಳಿಸಿದರು.
ಸಿನಿಮಾ ಥಿಯೇಟರ್ ಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಒಳಾಂಗಣ ಪ್ರದೇಶ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಯಾಗಿದೆ ಎಂದವರು ಹೇಳಿದರು.
ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಮಕ್ಕಳು, ಗರ್ಭಿಣಿಯರು ಪಾಲ್ಗೊಳ್ಳುವಂತಿಲ್ಲ ಎಂದು ಸಚಿವ ಅಶೋಕ್ ತಿಳಿಸಿದರು.

