ಮೋದಿ ಸಹೋದರರ ಆರೋಗ್ಯ ವಿಚಾರಿಸಿದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ

ಮೈಸೂರು ಬಳಿ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್, ಅವರ ಪುತ್ರ ಮತ್ತು ಸೊಸೆಯನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್. ಎ. ರಾಮದಾಸ್ ಜೆ.ಎಸ್.ಎಸ್. ಮಹಾವಿದ್ಯಾಪೀಠದ ಕಾರ್ಯದರ್ಶಿ ಮುಂಜುನಾಥ್ ಅವರುಗಳಿದ್ದರು.