ಯೋಗಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ 2 ಲಕ್ಷ ಲಡ್ಡು ವಿತರಣೆ

ಮೈಸೂರು: ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ 2 ಲಕ್ಷ ತಿರುಪತಿ ಮಾದರಿ ಲಡ್ಡು ವಿತರಣಾ ಕಾರ್ಯಕ್ರಮ ಜನವರಿ ಒಂದರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಸ್ಥಾಪಕಾಧ್ಯಕ್ಷ  ಪೆÇ್ರ.ಭಾಷ್ಯಂ ಸ್ವಾಮೀಜಿ ತಿಳಿಸಿದರು.

ದೇವಸ್ಥಾನದ ಆವರಣದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಬಗ್ಗೆ ಮಾಹಿತಿ ನೀಡಿದರು.

.1ರಂದು ಬೆಳಗಿನ ಜಾವ 4 ಗಂಟೆಗೆ  ಶ್ರೀಯೋಗಾ ನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ, ಶ್ರೀರಂಗಕ್ಷೇತ್ರ ಮಧುರೈ ಕ್ಷೇತ್ರಗಳಿಂದ ತರಿಸಿರುವ ವಿಶೇಷ ತೋಮಾಲೆ ಮತ್ತು ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ ಸಹಸ್ರ ನಾಮಾರ್ಚನೆ ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮಿ ದೇವರಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಮಾಡಲಾಗುವುದೆದರು.

ದೇವರಿಗೆ ಲಡ್ಡು ಹಾಗೂ ಇಪ್ಪತ್ತು ಕ್ವಿಂಟಾಲ್ ಪುಳಿಯೋಗರೆ ನಿವೇದನೆ ಮಾಡಿ, ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವರ್ಷ ಅಂದಾಜು 2,000 ಗ್ರಾಂ ತೂಕದ 10,000ಲಡ್ಡುಗಳು ಹಾಗೂ 150 ಗ್ರಾಂ ತೂಕದ ಎರಡು ಲಕ್ಷ ಲಡ್ಡುಗಳನ್ನು ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಜಾತಿ, ಮತ ಮತ್ತು ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು ಎಂದು ಭಾಷ್ಯಂ ಸ್ವಾಮಿಜಿ ತಿಳಿಸಿದರು.

ಲಡ್ಡು ಪ್ರಸಾದವನ್ನು ವಿಶೇಷವಾಗಿ ನುರಿತ 60 ಮಂದಿ ಬಾಣಸಿಗರಿಂದ ತಯಾರಿಸಲಾಗಿದ್ದು ಡಿ.21ರಿಂದ ಆರಂಭಿಸಿ ಡಿ.31ರವರೆಗೆ ಲಡ್ಡು ತಯಾರಿ ಕಾರ್ಯ ನಡೆಯಲಿದೆ ಎಂದರು.

ಲಡ್ಡು ತಯಾರಿಕೆಗೆ 75 ಕ್ವಿಂಟಾಲ್ ಕಡಲೆ ಹಿಟ್ಟು, 200 ಕ್ವಿಂಟಾಲ್ ಸಕ್ಕರೆ, 6,000 ಲೀಟರ್ ಖಾದ್ಯ ತೈಲ, 200 ಕೆ.ಜಿ.ಗೋಡಂಬಿ, 200 ಕೆ.ಜಿ. ಒಣದ್ರಾಕ್ಷಿ, 100 ಕೆ.ಜಿ ಬಾದಾಮಿ, 500 ಕೆ.ಜಿ. ಡೈಮಂಡ್ ಸಕ್ಕರೆ, 1,000 ಕೆ.ಜಿ. ಬೂರಾ ಸಕ್ಕರೆ, 200 ಕೆ.ಜಿ.ಪಿಸ್ತಾ, 50 ಕೆ.ಜಿ ಏಲಕ್ಕಿ, 40 ಕೆ.ಜಿ ಜಾಯಿಕಾಯಿ ಮತ್ತು ಜಾಪತ್ರೆ, 10 ಕೆ.ಜಿ.ಪಚ್ಚೆ ಕರ್ಪೂರ, 100 ಕೆ.ಜಿ. ಲವಂಗ ಬಳಸಲಾಗಿದೆ ಎಂದು ತಿಳಿಸಿದರು.

ಲೋಕಕಲ್ಯಾಣಕ್ಕಾಗಿ ಮತ್ತು ದೇಶದ ಎಲ್ಲಾ ಜನರ ಒಳಿತಿಗಾಗಿ ಸಮಸ್ತ ಜನರಿಗೆ ಸುಖ, ಶಾಂತಿ ನೆಮ್ಮದಿ ದೊರೆಯಲಿ ಎಂದು ಪ್ರಾರ್ಥಿಸುವ ಮತ್ತು ಎಲ್ಲಾ ಭಕ್ತಾದಿಗಳು  ಒಂದೇ ಎಂದು ಸಾರುವ ದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶ್ರೀಗಳು ಹೇಳಿದರು.

ಕೊರೋನಾ ಅಲೆಯನ್ನು ತಡೆಯಲು ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಮಾಸ್ಕ್ ಬಳಸಿ, ಸ್ನಾನಿಟೈಸರ್ ಉಪಯೋಗಿಸಿ, ಸಾರ್ವಜನಿಕ ಅಂತರ ಕಾಯ್ದುಕೊಳ್ಳಬೇಕೆಂದು ಮನವಿ ಅವರು ಸಂದರ್ಭದಲ್ಲಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್ ಮತ್ತಿತರರು ಉಪಸ್ಥಿತರಿದ್ದರು.