ಮೈಸೂರು: ಕನ್ನಡ ನಾಡು –ನುಡಿ ಬಗ್ಗೆ ಅಪಾರ ಕಳಕಳಿ ಹೊಂದಿದ್ದ ಡಾ.ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಸ್ಮರಿಸಿದರು.
ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ವಿಷ್ಣುಸೇನಾ ಸಮಿತಿ ವತಿಯಿಂದ ಡಾಕ್ಟರ್ ವಿಷ್ಣುವರ್ಧನ್ ರವರ 13 ಸ್ಮರಣೆ ಕಾರ್ಯಕ್ರಮದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ವಿಷ್ಣುವರ್ಧನ್ ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದರು. ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದು ತಿಳಿಸಿದರು.
ಚಿತ್ರ ನಿರ್ಮಾಪಕರು ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಎಂ. ಡಿ. ಪಾರ್ಥಸಾರಥಿ ಮಾತನಾಡಿ ಅಭಿಮಾನಿಗಳ ಅಚ್ಚುಮೆಚ್ಚಿನ ನಟ ಡಾ.ವಿಷ್ಣುವರ್ಧನ್. ಅವರ ಆದರ್ಶಮಯ ಜೀವನ ಮಾದರಿ ಎಂದು ಹೇಳಿದರು.
ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್, ಶ್ರೀ ಇಳೈಆಳ್ವಾರ್ ಸ್ವಾಮೀಜಿ, ನಗರಪಾಲಿಕ ಸದಸ್ಯ ಸತೀಶ್, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಎಸ್. ಎನ್. ರಾಜೇಶ್, ಬ್ರಹ್ಮಚಾರ್, ನವೀನ್, ದೀಪಕ್, ಮಹದೇವ್, ಕುಮಾರ್, ಬಸವರಾಜ್, ಮತ್ತಿತರರು ಹಾಜರಿದ್ದರು.

