ಮೈಸೂರು: ಚಾಮುಂಡಿಬೆಟ್ಟದಲ್ಲಿ ಯಾರೇ ಆಗಲಿ ಹೊಸ ವರ್ಷದ ಸಂಭ್ರಮ ಆಚರಿಸುವಂತಿಲ್ಲ.
ಬೆಟ್ಟದಲ್ಲಿ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ.ಹೊಸ ವರ್ಷದಂದು ಚಾಮುಂಡಿಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
31/12/2022 ರಾತ್ರಿ 9 ಗಂಟೆಯಿಂದ ಭಾನುವಾರ (01/01/2023) ಬೆಳಗ್ಗೆ 5 ಗಂಟೆಯವರೆಗೆ ನಿರ್ಬಂಧ ಹೇರಿ
ಮೈಸೂರು ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.
ಈಗಾಗಲೆ ದೇಶಕ್ಕೆ ಮತ್ತೆ ಕೊರೋನ ವಕ್ಕರಿಸಿದೆ. ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ಬಳಿ ಹೆಚ್ಚು ಜನ ಸೇರುವ ಕಾರಣ ಮುಂಜಾಗ್ರತೆಗಾಗಿ ನಿರ್ಬಂಧ ವಿಧಿಸಲಾಗಿದೆ.
ಚಾಮುಂಡಿ ಬೆಟ್ಟದ ನಿವಾಸಿಗಳು ಸಿಬ್ಬಂದಿಗಳಿಗೆ ಮಾತ್ರ ಅಲ್ಲಿ ಕೆಲಸಗಳಿಗೆ ಅವಕಾಶ ಕಲ್ಪಿಸಲಾಗಿದೆ.

