ಬೆಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳನ್ನ ಹಾಜರುಪಡಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಖುದ್ದು ತನಿಖಾಧಿಕಾರಿಯೇ ಸಾಕ್ಷ್ಯ ಹಾಜರುಪಡಿಸಬೇಕೆಂದು ಕೋರ್ಟ್ ಸೂಚಿಸಿದೆ.
ಸಂತೋಷ್ ಪಾಟೀಲ್ 2 ಮೊಬೈಲ್ಗಳ ಡಾಟಾದ ಸಂಪೂರ್ಣ ಮಾಹಿತಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಬಂದ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನ ನೀಡುವಂತೆ ಸೂಚಿಸಿದೆ.
ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಸಂತೋಷ್ ಪಾಟೀಲ್ ಸಹೋದರ, ಅಸಲಿ ಸಾಕ್ಷ್ಯಗಳನ್ನ ಮರೆಮಾಚಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. ಈ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದುದನ್ನು ಸ್ಮರಿಸಬಹುದು.

