ಹಾವೇರಿ: ಏಲಕ್ಕಿ ನಗರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ.
ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಸಾಹಿತ್ಯ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ತಪ್ಪು ಸಂದೇಶ ಹೋಗಬಾರದು. ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಹೆಬ್ಬಾರ್ ಹೇಳಿದರು.
ನಾವು ಬಹಳ ಸಂತೋಷದಿಂದ ಧ್ವಜಾರೋಹಣ ಮಾಡಿದ್ದೇವೆ. ನಿಗದಿ ಮಾಡಿದ ಏಳು ಗಂಟೆ ಸರಿಯಾಗಿ ಧ್ವಜಾರೋಹಣ ಮಾಡಿರುವುದು ವಿಶೇಷ ಎಂದು ಹೇಳಿದರು.
ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ತಪ್ಪು ಸಂದೇಶ ಹೋಗಬಾರದು.ಇದಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದು ತಿಳಿಸಿದರು.
ಸಾಹಿತ್ಯ ಪರಿಷತ್ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ,ನಾಡ ಧ್ವಜಾರೋಹಣವನ್ನು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ನೆರವೇರಿಸಿದರು.

