ಕೋಲಾರದಿಂದಲೇ ಸಿದ್ದು ಸ್ಪರ್ಧೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ಡಾಲರ್ ಪ್ರಶ್ನೆಗೆ ಕೊನೆಗೂ ತೆರೆಬಿದ್ದಿದೆ.

ಸಿದ್ದರಾಮಯ್ಯನವರು ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಾ ಕಣಕ್ಕಿಳಿಯಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರೇ ಸೋಮವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಸೋಮವಾರ ಕೆಲ ಕಾಂಗ್ರೆಸ್ ನಾಯಕರು, ಕೋಲಾರದ ಪ್ರಮುಖ ಕಾಂಗ್ರೆಸ್ಸಿಗರೊಂದಿಗೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಆ ನಂತರ ಸಿದ್ದರಾಮಯ್ಯ ತಾವು ಕೋಲಾರದಲ್ಲೇ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು.

ಸಿದ್ದರಾಮಯ್ಯ ಕಳೆದ ಬಾರಿ ಬಾಗಲಕೋಟೆಯ ಬಾದಾಮಿ ಮತ್ತು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ರ್ಪಧಿಸಿದ್ದರು. ಚಾಮುಂಡೇಶ್ವರಿಲ್ಲಿ ಸೋತು, ಬಾದಾಮಿಯಲ್ಲಿ ಅಲ್ಪಮತಗಳ ಅಂತರದಿಂದ ಜಯ ಗಳಿಸಿದ್ದರು.

ಈ ಬಾರಿ ರಾಜ್ಯದ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ನಡೆಸಿ ಇದೀಗ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.