ಬೆಂಗಳೂರು: ಶೀಘ್ರದಲ್ಲೇ ಸ್ಯಾಂಟ್ರೋ ರವಿ ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುತ್ತದೆ ಎಂದು ಹೇಳಿದರು.
ರವಿ ಹಿಂಬಾಲಕರನ್ನ ವಶಕ್ಕೆ ಪಡೆಯಲಾಗಿದೆ.ಸುಳ್ಳುಕೇಸ್ ದಾಖಲಿಸಿದ ಎಸ್ ಐ ವಿರುದ್ದ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಗೃಹ ಸಚಿವರ ಮನೆಯಲ್ಲಿ ರವಿ ಸಿಗಬಹುದು ಎಂಬ ಹೆಚ್.ಡಿ.ಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,ಡಿ.ಕೆ. ಶಿವಕುಮಾರ್, ಸಿದ್ಧರಾಮಯ್ಯ, ಹೆಚ್.ಡಿ.ಕೆ ಮನೆಯಲ್ಲಿ ಸಿಗಬಹುದು ಎಂದು ತಿರುಗೇಟು ನೀಡಿದರು.
ಚುನಾವಣೆ ವೇಳೆ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡುತ್ತಾರೆ ಇದರಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಟಾಂಗ್ ನೀಡಿದರು.

