ಹುಬ್ಬಳ್ಳಿ: ಕೋಲಾರದಿಂದ ಅಷ್ಟೇ ಅಲ್ಲಾ ಎಲ್ಲಿ ಬೇಕಾದರೂ ಸ್ಪರ್ಧಿಸಲು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸ್ವತಂತ್ರರು.ಆದರೆ ಸೋಲು ಗೆಲುವನ್ನು ಜನ ತೀರ್ಮಾನಿಸುತ್ತಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಕೋಲಾರ ಕ್ಷೇತ್ರದ ಬಗ್ಗೆ ನಾನು ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಆದರೆ ಅಲ್ಲಿನ ಜನ ಸೋಲು ಗೆಲುವಿನ ಬಗ್ಗೆ ನಿರ್ಧರಿಸುತ್ತಾರೆ ಎಂದು ಹೇಳಿದರು.
2ಎ ಮೀಸಲಾತಿಗಾಗಿ ಪಂಚಮಸಾಲಿಯವರು ಹಠಹಿಡಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈಗಾಗಲೇ ಪ್ರವರ್ಗ 2ರಲ್ಲಿ ಸೇರ್ಪಡೆಗೆ ನಿರ್ಣಯ ಮಾಡಿದ್ದೇವೆ ಎಂದು ತಿಳಿಸಿದರು.
ಅದರ ವರದಿಯನ್ನು ಬೇಗ ನೀಡುವಂತೆ ಸೂಚಿಸಿದ್ದೇನೆ. ಶಾಶ್ವತ ಆಯೋಗದಿಂದ ಬರುವ ವರದಿ ಮೇಲೆ ಎಲ್ಲಾ ಅಂತಿಮವಾಗಲಿದೆ ಎಂದು ಹೇಳಿದರು.

