ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲಿ

ಮೈಸೂರು: ಶ್ರೀ ಶಿವಕುಮಾರಸ್ವಾಮೀಜಿ ಸೂರ್ಯನಂತೆ ಎಲ್ಲರ ಮನೆ, ಮನಸ್ಸು ಬೆಳಗುವ ಮಹಾನ್ ಚೇತನ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ  ಹೇಳಿದರು.

ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ  ಕುವೆಂಪು ನಗರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ರೀಗಳು ನಮ್ಮೊಂದಿಗೆ ಇಂದಿಗೂ ಇದ್ದಾರೆ, ಮುಂದೆಯೂ ಇರುತ್ತಾರೆ. ಶಿವಕುಮಾರಸ್ವಾಮೀಜಿ ಅವರನ್ನು ಸ್ಮರಣೆ ಮಾಡುವುದರೊಂದಿಗೆ ಅವರ ದಾರಿ ಯಲ್ಲಿ ನಾವು ಸಾಗಬೇಕು ಎಂದು ಸಲಹೆ ನೀಡಿದರು.

ತ್ರಿವಿಧ ದಾಸೋಹಿಗಳಾದ ಡಾ.ಶಿವಕುಮಾರ ಸ್ವಾಮೀಜಿ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ ಮಾನಸಿಕವಾಗಿ ನಮ್ಮೊಂದಿಗೆ ಇದ್ದಾರೆ. ಇಷ್ಟಲಿಂಗ ಪೂಜೆಯನ್ನು ಜಗತ್ತಿಗೆ ತೋರಿಸಿಕೊಟ್ಟವರು ಶಿವಕುಮಾರ ಸ್ವಾಮೀಜಿ ಎಂದು ಅವರು ಹೇಳಿದರು.

ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ,ತುಮಕೂರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಮಾಡಿದ ಕಾರ್ಯ ದೇಶಕ್ಕೆ ಮಾದರಿಯಾಗಿದೆ ಭಾರತ ರತ್ನ ನೀಡಿ ಗೌರವಿಸಿದರೆ ಪ್ರಶಸ್ತಿಗೆ ಗೌರವ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಬಿ. ಎಂ. ರಘು, ನಗರಪಾಲಿಕೆ ನಾಮನಿರ್ದೇಶಕ ಸದಸ್ಯ ಜಗದೀಶ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ರಾಕೇಶ್, ಎಸ್. ಎನ್. ರಾಜೇಶ್, ಲಿಂಗರಾಜು, ಅಭಿಷೇಕ್ ಗೌಡ, ಅಪೂರ್ವ ಸುರೇಶ್, ದುರ್ಗಾ ಪ್ರಸಾದ್, ಮತ್ತಿತರರು ಹಾಜರಿದ್ದರು.