ಕಾಂಗ್ರೆಸ್ ವಿರುದ್ದ  ಸಿಎಂ  ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಂತಿದೆ ಕಾಂಗ್ರೆಸ್‍ನವರು ಇದರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಇಂದು ನಗರದಲ್ಲಿ ಕಾಂಗ್ರೆಸ್‍ನ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಲೋಕಾಯುಕ್ತ ಸಂಸ್ಥೆ ಮುಚ್ಚಿದ ಪುಣ್ಯಾತ್ಮರು  ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸ್ವತಂತ್ರ ಸಂಸ್ಥೆ ಲೋಕಾಯುಕ್ತವನ್ನು  ಮುಚ್ಚಿದ್ದು ಏಕೆಂದು ಗೊತ್ತಿದೆ. 69 ಪ್ರಕರಣ ಅವರ ಮೇಲಿತ್ತು.ಅದಕ್ಕಾಗಿ ಲೋಕಾಯುಕ್ತವನ್ನು ಮುಚ್ಚಿದರು ಎಂದು ಗುಡುಗಿದರು.

ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ಒಂದು ಭಾಗವಾಗಿತ್ತು. ಅವರು ಮಾಡಿದ ಕರ್ಮಕಾಂಡ ಮುಚ್ಚಿ ಹಾಕಲು ಲೋಕಾಯುಕ್ತ ಮುಚ್ಚಿದರು. ಅವರು ಏನೇ ಮಾಡಿದರೂ ಜನ ಒಪ್ಪಲ್ಲ ಎಂದು ತಿರುಗೇಟು ನೀಡಿದರು

ಶೇ. 60 ಪ್ರೀಮಿಯಂ ಕೊಟ್ಟಿರುವ ಸರ್ಕಾರ ಅಂದರೆ ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಎಂದು ಆರೋಪಿಸಿದರು.

ತಾವು ಮಾಡಿದ್ದನ್ನು ಮುಚ್ಚಿ ಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ಕೊಡಲಿ.ಲೋಕಾಯುಕ್ತ ಸಂಸ್ಥೆ ತನಿಖೆ ಮಾಡುತ್ತದೆ ಎಂದು ಬೊಮ್ಮಾಯಿ ತಿಳಿಸಿದರು.