ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರಿಗೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್  ಕಟೀಲ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಬಸವರಾಜ ಬೊಮ್ಮಾಯಿ ಮತ್ತು ಅವರ ತಂಡ ಭ್ರಷ್ಟಾಚಾರದ ಪಿತಾಮಹ ಎಂದು ಟೀಕಿಸಿದರು.

ಬಿಜೆಪಿ ನಾಯಕರು ಮತದಾರರಿಗೆ ಅಮಿಷವೊಡ್ಡಲು ಹೊರಟಿದ್ದಾರೆ. 40 ಪರ್ಸೆಂಟ್ ಕಮಿಷನ್ ಮೂಲಕ ಸಾವಿರಾರು ಕೋಟಿ ರೂ. ಸಂಗ್ರಹಿಸಿದ್ದಾರೆ ಎಂದು ದೂರಿದರು.

ರಮೇಶ್ ಜಾರಕಿಹೊಳಿ ಒಂದು ಮತಕ್ಕೆ 6 ಸಾವಿರ ರೂ. ಕೊಡುತ್ತೇವೆ ಎಂದಿದ್ದಾರೆ. ಅಮಿಷ ಒಡ್ಡಿರುವ ವಿಡಿಯೋ ಇದೆ. ಸಂಬಂಧ ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಡಿಕೆಶಿ ತಿಳಿಸಿದರು.

ಪೊಲೀಸರು ಕೂಡಲೇ ಎಫ್ ಆರ್ ದಾಖಲಿಸಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿದರು.