ಬೆಂಗಳೂರು: ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಳ್ಳಂಬೆಳಿಗ್ಗೆ 25ಕ್ಕೂ ಹೆಚ್ಚು ಚಿನ್ನದ ಅಂಗಡಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಒಟ್ಟು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿಯಲ್ಲಿ ಪಾಳ್ಗೊಂಡಿದೆ. ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದಾರೆ.

