ಬಜೆಟ್‍  ನಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ

ನವದೆಹಲಿ: ಮಧ್ಯಕರ್ನಾಟಕಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಭದ್ರ ಮೇಲ್ದಂಡೆ ಯೋಜನೆಗೆ ಈ‌ ಬಾರಿಯ ಬಜೆಟ್‍ನಲ್ಲಿ 5300 ಕೋಟಿ ಅನುದಾನ ನೀಡುವ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ.

ಕರ್ನಾಟಕದ ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮತ್ತಿತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗೆ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು 5300 ಕೋಟಿ ಅನುದಾನ ಹಾಗೂ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದಾರೆ.

ಹಾಗಾಗಿ ಭದ್ರ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.

ಹನಿ ನೀರಾವರಿ ಮೂಲಕ ಸೌಲಭ್ಯ ಕಲ್ಪಿಸುವ ಬೃಹತ್ ಗಾತ್ರದ ನೀರಾವರಿ ಯೋಜನೆ ಇದಾಗಿದೆ.