ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಆದರೂ ಸಿದ್ದು ಬೆಂಬಲಿಗರು ಈ ಬಾರಿಯೂ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವಂತೆ ಒತ್ತಡ ಹಾಕಿದ್ದಾರೆ.
ಗುರುವಾರ ಬೆಂಗಳೂರಿನ ಸಿದ್ಧರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು, ಕಳೆದ ಬಾರಿಯಂತೆ ಈ ಬಾರಿ ಆಗಲು ಬಿಡುವುದಿಲ್ಲ.ನಮ್ಮ ಕ್ಷೇತ್ರಕ್ಕೇ ಬನ್ನಿ ಅಲ್ಲಿಂದಲೆ ಸ್ಪರ್ಧಿಸಿ ಎಂದು ಒತ್ತಾಯಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ ದೇವೇಗೌಡರ ವಿರುದ್ಧ ಸಿದ್ಧರಾಮಯ್ಯ ಸೋಲನುಭವಿಸಿದ್ದರು.

