ಢಾಖಾ: ಬಾಂಗ್ಲಾದೇಶದಲ್ಲಿ ಸುಮಾರು 14 ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ದೇವರ ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ.
ದೇಶದ ವಾಯುವ್ಯ ಪ್ರದೇಶದ ಠಾಕೂರ್ಗಾಂವ್ನ ಬಲಿಯಾದಂಗಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂಗಳು ಆತಂಕಗೊಂಡಿದ್ದಾರೆ.
ಕೋಲು ಮತ್ತಿತರ ಆಯುಧಗಳೊಂದಿಗೆ ಬಂದ ದುಷ್ಕರ್ಮಿಗಳು ದೇವಸ್ಥಾನಗಳಿಗೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಅನೇಕ ವಿಗ್ರಹಗಳು ತುಂಡು ಮಾಡಿ ಮುರಿದು ಕೊಳಕ್ಕೆ ಎಸೆದಿದ್ದಾರೆ.
ದಾಳಿ ಮಾಡಿದ ಆರೋಪಿಗಳನ್ನು ಗುರುತಿಸಲಾಗಿದ್ದು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ವಿಧ್ವಂಸಕ ಘಟನೆಯನ್ನು ಖಂಡಿಸಿರುವ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ದೇವಾಲಯಗಳಿಗೆ ಹಾಗೂ ಹಿಂದೂಗಳಿಗೆ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

