ಯಡಿಯೂರಪ್ಪಜೊತೆ ಕೈಜೋಡಿಸದಿದ್ದರೆ ನಿರ್ನಾಮ ಆಗುತ್ತಿದ್ದರು -ಎಚ್ಡಿಕೆ

ಕಾರವಾರ: ನಾನು ಯಡಿಯೂರಪ್ಪ ಜೊತೆ ಕೈ ಜೋಡಿಸದಿದ್ದರೆ ಅವರು ನಿರ್ನಾಮ ಆಗುತ್ತಿದ್ದರು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪಂಚರತ್ನ ಯಾತ್ರೆ ವೇಳೆ ಕಾರವಾರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿಜಯೇಂದ್ರ ಆಗ ಎಲ್ಲಿ ಬರುತ್ತಿದ್ದರು ಸಿದ್ದಲಿಂಗಯ್ಯ ಎನ್ನುವವರು ನನಗೆ ಚೀಟಿ ನೀಡಿದ್ದರು.ಯಡಿಯೂರಪ್ಪ ಅವರನ್ನ ಮಂತ್ರಿ ಮಾಡುವಂತೆ ಮನವಿ ಮಾಡಿಕೊಂಡಿದ್ದರು.

ಆಗ ನಾನು ನಿಮ್ಮ ನಾಯಕತ್ವವೇ ಇರಲಿ ಎಂದು ಸಮ್ಮಿಶ್ರ ಸರ್ಕಾರ ರಚನೆ ಮಾಡಿ ಯಡಿಯೂರಪ್ಪ ಅವರನ್ನ ಸಿಎಂ ಮಾಡಿದ್ದೆ ಎಂದು ತಿಳಿಸಿದರು.

ವೀರಶೈವರಿಗೆ ಏನು ಮಾಡಿದೆ ಎಂದು ವಿಜಯೇಂದ್ರ ಅವರಿಗೆ ಗೊತ್ತಿಲ್ಲ. ನಮ್ಮ ತಂದೆ ವಿಧಾನಸಭೆ ವಿಸರ್ಜನೆ ಮಾಡಲು ಹೋಗಿದ್ದರು. ಆಗ ಯಡಿಯೂರಪ್ಪ ಜೊತೆ ಸೇರಿ ಸರ್ಕಾರ ಮಾಡಿದ್ದೆವು. ಅಧಿಕಾರದಲ್ಲಿ ಇದ್ದ ವೇಳೆ ಬಿಜೆಪಿಯವರನ್ನ ಗೌರವದಿಂದ ಕಂಡಿದ್ದೇನೆ. ಬಿಜೆಪಿ ಬೆಳವಣಿಗೆಗೆ ಇದೇ ಸಹಕಾರಿ ಆಗಿತ್ತು. ಪೇಶ್ವೆ ವಂಶಸ್ಥರು ಅವರಿಗೆ ಅಧಿಕಾರವನ್ನ ಕೊಡಲು ಬಿಡಲಿಲ್ಲ ಎಂದು ಮಾರ್ಮಿಕಾವಾಗಿ ನುಡಿದರು.

ಅವರೇ ಯಡಿಯೂರಪ್ಪ ಸರ್ಕಾರವನ್ನ ತೆಗೆದರು. ಎರಡನೇ ಬಾರಿ ಕಷ್ಟ ಪಟ್ಟು ಯಡಿಯೂರಪ್ಪ ಸಿಎಂ ಆದರು. ಅವರನ್ನ ಹೇಗೆ ನಡೆಸಿಕೊಂಡಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ನಾನು ವೀರಶೈವ, ದಲಿತ ಎಲ್ಲಾ ಸಮುದಾಯಕ್ಕೂ ಗೌರವ ನೀಡಿದ್ದೇನೆ ಎಂದರು.

ವಂಶಾಡಳಿತ ಕುರಿತು ಮಾತನಾಡಿದ ಅವರು, ವಂಶಾಡಳಿತ ಬಿಜೆಪಿ, ಕಾಂಗ್ರೆಸ್ನಲ್ಲಿ ಇಲ್ಲವೇ, ನನ್ನ ಕುಟುಂಬದ ಮೇಲೆಯೇ ಟಾರ್ಗೆಟ್ ಮಾಡುತ್ತಾರೆ ಎಂದು ಗರಂ ಆದರು.

ಜನರ ಮೇಲೆ ನಮ್ಮ ಕುಟುಂಬದ ಪ್ರೀತಿಯನ್ನ ನೋಡಿ ಟಾರ್ಗೆಟ್ ಮಾಡ್ತಾ ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೆನೆ ಹೊಲದಲ್ಲಿ ಇರಲಿ ಎಂದಿದ್ದಾರೆ. ಹೊಲದಲ್ಲಿ ತೆನೆ ಇದ್ದರೆ ಕೈಗೆ ಕೆಲಸ. ಕೈ ನಾಡಿನ ಜನತೆಗೆ ಸರಿಯಾಗಿ ಕೆಲಸ ಮಾಡಿಲ್ಲ ಎಂದು ರೇಖೆ ಅಳಿಸಿದ್ದಾರೆ. ತೆನೆ ಜನರನ್ನ ನೆಮ್ಮದಿಯಿಂದ ಬದುಕುವಂತೆ ಮಾಡುತ್ತದೆ. ಕಾಂಗ್ರೆಸ್ ವಿಫಲವಾಗಿದ್ದಕ್ಕೆ ಕೈ ಮೇಲೆ ಜನರು ರೇಖೆ ಎಳೆದಿದ್ದಾರೆ ಎಂದು  ಡಿಕೆಶಿಗೆ ಎಚ್ ಡಿ ಕೆ ಟಾಂಗ್ ನೀಡಿದರು.