ಕರ್ನಾಟಕ ರಾಜ್ಯ ಬಜೆಟ್ ಹೈಲೈಟ್ಸ್

ಶೂನ್ಯ ಬಡ್ಡಿಯಲ್ಲಿ ರೈತರಿಗೆ ರೂ.5 ಲಕ್ಷ ಸಾಲ ಸೌಲಭ್ಯ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಮಹಿಳಾ ಕಾರ್ಮಿಕರಿಗೆ 500 ರೂ ಸಹಾಯಧನ 

ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

ಅಂಗನವಾಡಿ, ಆಶಾ ಕಾರ್ಯಕರ್ತರೆಯರಿಗೆ ಸಹಾಯಧನ 

ಬಳ್ಳಾರಿ ಮೆಗಾ ಡೇರಿಗೆ 100 ಕೋಟಿ ಅನುದಾನ

ಒಂದು ತೋಟ, ಒಂದು ಬೆಳೆ ಯೋಜನೆ

ಪದವಿ ಶಿಕ್ಷಣ ಮುಗಿಸಿ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ‘ಯುವಸ್ನೇಹಿ’ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು

ಗ್ರಾಮ ಪಂಚಾಯಿತಿಗೆ 22 ಲಕ್ಷ ರೂ.ನಿಂದ 60 ಲಕ್ಷ ರೂ. ವರೆಗೆ ಅನುದಾನ ನೀಡಲಾಗುವುದು. 

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಸಹಾಯ ಧನ

ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ 

15,767 ಕೋಟಿ ರೂ. ವೆಚ್ಚದಲ್ಲಿ ಉಪನಗರ ರೈಲ್ವೆ ಯೋಜನೆ ಅನುಷ್ಠಾನ

ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಸುರಕ್ಷಿತವಾಗಿ ಮನೆಗೆ ತಲುಪಿಸಲು ಸಾರಿಗೆ ಸೌಲಭ್ಯ

ಕೊಡಗು ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ.

ಈ ವರ್ಷದಿಂದ 200 ಕನ್ನಡ ಚಿತ್ರಮಂದಿರಗಳಿಗೆ ಸಬ್ಸಿಡಿ

ಮುಂದಿನ 2 ವರ್ಷಗಳಲ್ಲಿ, ನಮ್ಮ ಸರ್ಕಾರದಿಂದ 1000 ಕೋಟಿ ರೂಪಾಯಿ ವೆಚ್ಚದಲ್ಲಿ ಮಠಗಳ ವಿವಿಧ ದೇವಾಲಯಗಳ ಸಮಗ್ರ ಅಭಿವೃದ್ಧಿ ಮತ್ತು ಜೀರ್ಣೋದ್ಧಾರ

ಎಲ್ಲ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ

ಮಾರಣಾಂತಿಕ ಕಾಯಿಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಆರ್ಥಿಕ ಭದ್ರತೆ ಜೊತೆಗೆ ಸ್ವಯಂ ನಿವೃತ್ತಿ ಅವಕಾಶ

ಎಸ್​ಸಿ, ಎಸ್​ಟಿ BPL ಕಾರ್ಡ್​ ಹೊಂದಿದವರಿಗೆ ಅಮರ್ ಜ್ಯೋತಿ ಯೋಜನೆಯಡಿ 75 ಯೂನಿಟ್ ಉಚಿತ ವಿದ್ಯುತ್. 

ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಣೆ 

ರಾಜ್ಯದಲ್ಲಿ ಹೊಸದಾಗಿ 6 ಇಎಸ್​ಐ ಆಸ್ಪತ್ರೆಗಳ ನಿರ್ಮಾಣ

1,230 ಶಾಲಾ ಕೊಠಡಿ ನಿರ್ಮಾಣ.

ರಾಜ್ಯದಲ್ಲಿ ಹೊಸದಾಗಿ 7 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ

ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪನೆ.