ಸಿಲಿಕಾನ್‌ ಸಿಟಿ ಅಭಿವೃದ್ಧಿಗೆ 10 ಸಾವಿರ ಕೋಟಿ

ಬೆಂಗಳೂರು: ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾರಿಯ ಬಜೆಟ್ನಲ್ಲಿ 10 ಸಾವಿರ ಕೋಟಿ ರೂ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಬದ್ದ ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.

ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಗ್ರಾಮಗಳ  ರಸ್ತೆಗಳ ಪುನರ್ನಿರ್ಮಾಣಕ್ಕೆ ಬಜೆಟ್ ನಲ್ಲಿ 300 ಕೋಟಿ ರೂ.ನಿಗದಿಪಡಿಸಿದ್ದಾರೆ ಬೊಮ್ಮಾಯಿ.