ಬೆಂಗಳೂರು: ಅನ್ನದಾತರಿಗೆ ಬಜೆಟ್‍ನಲ್ಲಿ ಸಿಎಂ ಬಂಪರ್ ಕೊಡುಗೆ ನೀಡಿದ್ದು, ಈ ವರ್ಷದಿಂದ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ.
ರೈತರ ಆರ್ಥಿಕ ಸದೃಢತೆಗಾಗಿ ಹಾಗೂ ಕೃಷಿ ಚಟುವಟಿಕೆಗಳ ಉತ್ತೇಜನಕ್ಕಾಗಿ ಅಲ್ಪಾವಧಿ ಸಾಲದ ಮೊತ್ತವನ್ನು ಹೆಚ್ಚಿಸಿದ್ದು, ಕೃಷಿ ಚಟುವಟಿಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಲಿದೆ ಜತೆಗೆ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.
ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ರೂ.ಗಳಷ್ಟು ಸಾಲ ವಿತರಿಸಲಾಗುವುದು ಎಂದು ತಿಳಿಸಿದರು.

