ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಮಹಿಳೆಯರಿಗೆ ಮುಖ್ಯಮಂತ್ರಿ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಗೃಹಿಣಿಯರಿಗೆ ಸಹಾಯ ಧನ, ವಿದ್ಯಾರ್ಥಿನಿಯರಿಗೆ ಫ್ರೀ ಬಸ್ ಪಾಸ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಗೃಹಿಣಿಶಕ್ತಿ ಯೋಜನೆ ಜಾರಿ ಮಾಡಲಾಗುತ್ತಿದೆ. ಮಹಿಳೆಯರಿಗೆ ತಿಂಗಳಿಗೆ 500 ರೂ ಸಹಾಯಧನ ನೀಡಲಾಗುವುದು.1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಬೊಮ್ಮಾಯಿ ಘೋಷಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ-
ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಗ್ರಂಥ ಪಾಲಕರ ಗೌರವಧನ 1000 ರೂ. ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಘೋಷಿಸಿದರು.
69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ಸಾಲ ಮಂಜೂರು. ಎಸ್ಸಿ, ಎಸ್ಟಿ BPL ಕಾರ್ಡ್ ಹೊಂದಿದವರಿಗೆ ಅಮರ್ ಜ್ಯೋತಿ ಯೋಜನೆಯಡಿ 75 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ತಿಳಿಸಿದ್ದಾರೆ.
ಮಾರಣಾಂತಿಕ ಕಾಯಿಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಆರ್ಥಿಕ ಭದ್ರತೆ ಜೊತೆಗೆ ಸ್ವಯಂ ನಿವೃತ್ತಿ ಅವಕಾಶ ನೀಡಲಾಗುವುದು ಎಂದು ಹೇಳಿದರು.
ವಿದ್ಯಾರ್ಥಿಗಳಿಗಾಗಿ ಮಕ್ಕಳ ಬಸ್ ಯೋಜನೆ:
ರಾಜ್ಯದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಮಕ್ಕಳ ಬಸ್ ಯೋಜನೆ ಪ್ರಾರಂಭಿಸಲಾಗುವುದು ಎಂದು ಸಿಎಂ ತಿಳಿಸಿದರು.
ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು.
ರಾಜ್ಯದಲ್ಲಿ ಹೆಚ್ಚುವರಿಯಾಗಿ 2022-2023ನೇ ಸಾಲಿನಲ್ಲಿ 1,230 ಶಾಲಾ ಕೊಠಡಿ ನಿರ್ಮಾಣ, ಹೊಸದಾಗಿ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುತ್ತದೆ.
47 ವಸತಿ ಶಾಲೆಗಳ ದುರಸ್ತಿ, ಸ್ಮಾರ್ಟ್ ಕ್ಲಾಸ್. 30 ಕಸ್ತೂರಬಾ ಗಾಂಧಿ ವಸತಿ ಶಾಲೆ ಹೈಟೆಕ್ , ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
24 347 ಶಾಲೆಗಳಲ್ಲಿ ರೀಡಿಂಗ್ ಕಾರ್ನರ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
100 ಕೋಟಿ ವೆಚ್ಚದಲ್ಲಿ ಮಕ್ಕಳ ಬಸ್ ಯೋಜನೆ ಅನುಷ್ಠಾನಗೊಳ್ಳಲಿದ್ದು, 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಅಭಿವೃದ್ದಿ ಆಕಾಂಕ್ಷಿ ತಾಲೂಕೂಗಳಲ್ಲಿ ಶಿಕ್ಷಣ ಆರೋಗ್ಯ ಮತ್ತು ಪೌಷ್ಟಿಕತೆಗೆ 3000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬೊಮ್ಮಾಯಿ ಘೋಷಿಸಿದರು.

