ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.
ಕೃಷಿ ಮತ್ತು ಪೂರಕ ಚಟುವಟಿಕೆಗಳು, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ಬೆಂಗಳೂರು ಸಮಗ್ರ ಅಭಿವೃದ್ಧಿ, ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆ, ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿ, ಮಕ್ಕಳ ಅಭ್ಯುದಯ ಎಂದು ವಿಂಗಡಣೆ ಮಾಡಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಈ ಬಾರಿಯ ಬಜೆಟ್ ಮಂಡನೆಯಾಗಿದೆ.
ಬಜೆಟ್ ಗಾತ್ರ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಳವಾಗಿರುವುದು ವಿಶೇಷ.

