ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಆಟೋ ಗೆ ಬೆಂಕಿ ಬಿದ್ದಿದ್ದು ಸಂಪೂರ್ಣ ಕರಕಲಾಗಿರುವ ಘಟನೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸಿದ್ದಪ್ಪ ವೃತ್ತದ ಬಳಿ ರಸ್ತೆಯಲ್ಲಿ ಈ ಪ್ರಮಾದ ಜರುಗಿದೆ.
ಬೆಂಕಿ ಕ್ಷಣಮಾತ್ರದಲ್ಲಿ ಇಡೀ ಆಟೋಗೆ ಆವರಿಸಿ ಸಂಪೂರ್ಣ ಸುಟ್ಟು ಹೋಗಿದೆ.
ವಿಷಯ ತಿಳಿದು ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅವರು ಬರುವುದು ತಡವಾಗಿದ್ದರೆ ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ವ್ಯಾಪಿಸಿ ಭಾರೀ ಅನಾಹುತ ಸಂಭವಿಸುತ್ತಿತ್ತು.
ಸದ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಹೆಚ್ಚಿನ ತೊಂದರೆಯಾಗಿಲ್ಲ.
ರವೀಂದ್ರ ಎಂಬುವರಿಗೆ ಸೇರಿದ ಪ್ಯಾಸೆಂಜರ್ ಆಟೋ ಸುಟ್ಟು ಕರಕಲಾಗಿದ್ದು
ಕಿಡಿಗೇಡಿಗಳ ಕೃತ್ಯ ಇರಬಹುದೆಂದು ಶಂಕಿಸಲಾಗಿದೆ.
ಲಕ್ಷ್ಮೀಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

