7ನೇ ವೇತನ ಆಯೋಗ ಮಧ್ಯಂತರ ವರದಿ ಅನುಷ್ಠಾನ‌ ಮಾಡಲು ಮುಂದಾದ ಸರ್ಕಾರ

ಬೆಂಗಳೂರು: ಸರ್ಕಾರಿ ನೌಕರರ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಅನುಷ್ಠಾನ ಮಾಡಲು ಮುಂದಾಗಿದೆ.

7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಹಾಗೂ ಒಪಿಎಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಸರ್ಕಾರಿ ನೌಕರರು ಮಾರ್ಚ್ 1 ರಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರು.

ವಿಧಾನಸಭೆ ಚುನಾವಣೆ ಸಪೀಸುತ್ತಿರುವ ಸಂದರ್ಭದಲ್ಲಿ ನೌಕರರು ಮುಷ್ಕರ ನಡೆಸಿದರೆ, ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ 7 ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಸ್ವೀಕರಿಸಿ 2023 ಜನವರಿ 1ರಿಂದ ಪೂರ್ವ ಅನ್ವಯವಾಗುಂತೆ ಅನುಷ್ಠಾನ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೊತ್ತಾಗಿದೆ.