ಮೈಸೂರು: ಮೈಸೂರು ಸಮೀಪದ ಇಲವಾಲ ಹೋಬಳಿ ಕೆ ಹೆಮ್ಮನಹಳ್ಳಿ ಗ್ರಾಮದಲ್ಲಿ ಪೈಪ್ ಒಡೆದುಹೋಗಿ ಅಪಾರ ಪ್ರಮಾಣದ ಕಾವೇರಿ ನೀರು ಪೋಲಾಗುತ್ತಿದೆ.
ಉಂಡುವಾಡಿಯಿಂದ ಸುಮಾರು 20 ಹಳ್ಳಿಗಳಿಗೆ ಕುಡಿಯುವ ನೀರನ್ನು ಈ ಪೈಪ್ ಲೈನ್ ನಿಂದಲೇ ಸರಬರಾಜು ಮಾಡಲಾಗುತ್ತದೆ.
ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ನೀರು ಪೋಲಾಗುತ್ತಿದ್ದರೂ ಸಂಬಂಧಪಟ್ಟವರು ಯಾರೂ ಇತ್ತ ತಿರುಗಿ ನೋಡಿಲ್ಲ.
ಸ್ಥಳೀಯರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಈಗಾಗಲೇ ಬೇಸಿಗೆ ಶುರುವಾಗಿದೆ.ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಆಗಲಿದೆ.
ಇಂತಹ ತುರ್ತು ಸಂಧರ್ಭದಲ್ಲಿ ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಪೈಪ್ ಲೈನ್ ದುರಸ್ಥಿ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

