ಮೈಸೂರು: ದೇಶದಲ್ಲೇ ದಿವಾಳಿ ಆಗಿರುವ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದು ಎಟಿಎಂ ಆಗಲು ಹುನ್ನಾರ ನಡೆಸಿದೆ ಎಂದು ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜೇಂದ್ರ ಆರೋಪಿಸಿದರು.
ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ದೇಶದಾದ್ಯಂತ ದಿವಾಳಿ ಆಗಿದೆ.ಇನ್ನೂ ಬುದ್ದಿ ಬಂದಿಲ್ಲ,ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಹೈ ಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಈ ಬಾರಿ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಉಂಟಾದರೆ ತಮ್ಮ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಜೆಡಿಎಸ್ ಕನಸು ಕಾಣುತ್ತಿದೆ ಎಂದು ವಿಜೇಂದ್ರ ಟೀಕಿಸಿದರು.
ಇದೆಲ್ಲ ಅರಿತಿರುವ ರಾಜ್ಯದ ಮತದಾರರು ಈ ಸಾರಿ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸಿ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಶೆಟ್ಟರ್ ಅವರು ಒಂದು ವೇಳೆ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ಗೆಲ್ಲುತ್ತಿದ್ದರೇನೋ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಉತ್ತರಿಸಿದರು.
ವರುಣಾದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣ ಜಯ ಗಳಿಸಲಿದ್ದಾರೆಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ತಂದೆ ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಅವರೊಂದು ಶಕ್ತಿ ಎಂದರು.
ಪ್ರಧಾನಿ ಮೋದಿ ಮತ್ತು ಬಿಜೆಪಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ರಾಜ್ಯದ ಮತದಾರ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲಿದ್ದಾನೆಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಕೆ.ಆರ್ ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ, ಮೇಯರ್ ಶಿವಕುಮಾರ್ , ನಗರಾಧ್ಯಕ್ಷ ಗಿರಿಧರ್ ಹಾಗೂ ವಕ್ತಾರ ಮೋಹನ್ ಉಪಸ್ಥಿತರಿದ್ದರು.

