ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿ.ಕೆ ಶಿವಕುಮಾರ್ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಏರಿದ್ದರು.
ಜಕ್ಕೂರಿನಿಂದ ಹೆಲಿಕಾಪ್ಟರ್ ಟೇಕಾಫ್ ಆಗಿ ಹೊಸಕೋಟೆ ಬಳಿ ಹೋಗುತ್ತಿದ್ದಾಗ ಹದ್ದು ಡಿಕ್ಕಿ ಹೊಡೆದಿದೆ.
ಹದ್ದು ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್ ಮುಂದಿನ ಗಾಜು ಪುಡಿ ಪುಡಿಯಾಗಿದೆ.
ತಕ್ಷಣ ಎಚ್ಚೆತ್ತ ಪೈಲಟ್ ಎಚ್‌ಎಎಲ್‌ನಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಷ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ಡಿ.ಕೆ ಶಿವಕುಮಾರ್ ಸೇರೆ ನಾಲ್ಕು ಮಂದಿ ಪ್ರಯಣಿಸುತ್ತಿದ್ದರು.
ಹೆಲಿಕಾಪ್ಟರ್‌ನಿಂದ ಇಳಿದ ಡಿ.ಕೆ ಶಿವಕುಮಾರ್ ಕಾರಿನಲ್ಲಿ ಮುಳಬಾಗಿಲು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.

