ರಾಜ್ಯಾದ್ಯಂತ ಉತ್ಸಾಹದಿಂದ ಮತ ಚಲಾಯಿಸಿದ ಮತದಾರ: ಮತದಾನದಲ್ಲಿ ಶೇಖಡವಾರು‌ ಹೆಚ್ಚಳ

ಬೆಂಗಳೂರು: ರಾಜ್ಯದ್ಯಂತ ವಿಧಾನಸಭಾ ಚುನಾವಣೆಗೆ ಈ ಬಾರಿ ಮತದಾರರು ಉತ್ಸಾಹದಿಂದಲೇ ಮತದಾನ ಮಾಡಿದ್ದಾರೆ.

2018ರ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿತ್ತು. ಆದರೆ ಈ ಬಾರಿ ಆಯಾ ಜಿಲ್ಲಾಡಳಿತಗಳು ಸ್ವೀಪ್ ಸಮಿತಿ ಮತ್ತು ಚುನಾವಣಾ ಆಯೋಗ ಹೆಚ್ಚಿನ ಮತದಾನ ಮಾಡಿಸುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಹಲವಾರು ರೀತಿಯ ಕ್ರಮಗಳನ್ನು ಕೈಗೊಂಡಿದ್ದವು

ಹಾಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತದಾನ ಶೇಕಡವಾರು ಚೆನ್ನಾಗಿಯೇ ಆಗಿದೆ ಆದರೆ ಬೆಂಗಳೂರು ನಗರದಲ್ಲಿ ಮಾತ್ರ ಶೇಕಡ 50ರಷ್ಟು ಮಾತ್ರ ಮತದಾನ ಆಗಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರು ಅತ್ಯುತ್ಸಾಹದಿಂದ ಮತದಾನ ಮಾಡಿದ್ದಾರೆ.ಆದ್ದರಿಂದ ಶೇಕಡವಾರು ಮತದಾನದಲ್ಲಿ ಹೆಚ್ಚಳವಾಗಿದ್ದು ಈ ಬಾರಿ ಇಲ್ಲಿ ಸುಮಾರು 70% ಮತದಾನ ಆಗಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಕೆಲವೆಡೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದೆ. ಮತ್ತು ಕೆಲವೆಡೆ ಮತದಾರರು ಮತ್ತು ಬೂತ್ ಸಿಬ್ಬಂದಿ ಜತೆಗೆ ಮಾತಿನ ಚಕಮಕಿ ನಡೆದ ಬಗ್ಗೆ ವರದಿಯಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮತದಾರ ಪ್ರಭುಗಳು ಉತ್ಸಾಹದಿಂದ ಮತದಾನ ಮಾಡಿ ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಇನ್ನು ರಾಜಕೀಯ ದಿಗ್ಗಜರುಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಚಿವ ಸಹೋದ್ಯೋಗಿಗಳು ಮತ್ತು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ, ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಪ್ರಮುಖರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅಲ್ಲದೆ ಚಿತ್ರರಂಗದ ಗಣ್ಯರು, ನಟ ನಟಿಯರು ಕೂಡ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ.

ಈ ಬಾರಿ ದುರದೃಷ್ಟವೋ ಏನು ಮತದಾನ ಮಾಡಲು ಬಂದಿದ್ದ ಸಂದರ್ಭದಲ್ಲಿ ನಾಲ್ಕೈದು ಮಂದಿ ಮೃತಪಟ್ಟ ಘಟನೆಯು ವರದಿಯಾಗಿದೆ.