ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತು ಇರಲಿದೆ: ಪರಮೇಶ್ವರ್‌

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ  ಯೋಜನೆಗಳಿಗೆ ಷರತ್ತುಗಳು ಅನ್ವಯವಾಗಲಿವೆ ಎಂದು ಮಾಜಿ ಉಪ ಮುಖ್ಯ ಮಂತ್ರಿ ಪರಮೇಶ್ವರ್‌ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಜನರು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ವಿದ್ಯುತ್‌ ಶುಲ್ಕ ಕಟ್ಟುವುದಿಲ್ಲ ಎನ್ನುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಮೊದಲ ಕ್ಯಾಬಿನೆಟ್‌ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ, ಅದಕ್ಕೆ ನಾವು ಬದ್ದ ಎಂದು ಹೇಳಿದರು.

ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು. 

ಸಿಎಂ ಆಯ್ಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್ ಹೇಳಿದರು.

ಸಿದ್ದರಾಮಯ್ಯ ಜೊತೆ ಶಾಸಕರು ಹೋಗಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರಲ್ಲಾ ಎಂದು ಕೇಳಿದ್ದಕ್ಕೆ ಕೆಲವು ಶಾಸಕರು ಅವರ ನಾಯಕರ ಜೊತೆ ಹೋಗಿದ್ದಾರೆ. ಅದನ್ನ ಶಕ್ತಿ ಪ್ರದರ್ಶನ ಎಂದು ಹೇಳುವುದು ಸರಿಯಲ್ಲ ಎಂದು ತಿಳಿಸಿದರು.