ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಕಟಿಸಿದಂತೆ 5 ಗ್ಯಾರಂಟಿಗಳನ್ನು ಇಂದಿನಿಂದಲೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಪ್ರಮಾಣವಚನ ಸ್ವೀಕರಿಸಿದ ನಂತರ ಅದೇ ವೇದಿಕೆಯಲ್ಲಿ ಸಿದ್ದರಾಮಯ್ಯ 5 ಗ್ಯಾರಂಟಿಗಳನ್ನು ಇಂದಿನಿಂದಲೇ ಜಾರಿ ಮಾಡಬಹುದಾಗಿ ವಾಗ್ದಾನ ಮಾಡಿದರು.
200 ಯೂನಿಟ್ ವಿದ್ಯುತ್,ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ,ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ನೆರವು,ಗೃಹಿಣಿಯರಿಗೆ2000 ರೂ ನೆರವು ನೀಡುವುದಾಗಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡಿತ್ತು.
ಈ ಎಲ್ಲಾ ಗ್ಯಾರಂಟಿ ಗಳನ್ನು ಇಂದಿನಿಂದಲೇ ಜಾರಿಗೆ ತರುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

