ಬೆಂಗಳೂರು: ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ನಡೆದುಕೊಂಡ ರೀತಿಗೆ ನೂತನ ಸಚಿವ ಜಮೀರ್ ಅಹಮದ್ ಖಾನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪ್ರಮಾಣವಚನ ಸ್ವೀಕಾರ ಮಾಡುವ ಸಂದರ್ಭದಲ್ಲಿ ಜಮೀರ್ ಅಹಮದ್ ಖಾನ್ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಕನ್ನಡ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮೊದಲ ಸಲ ಶಾಸಕರಾಗಿ, ಸಚಿವರಾಗಿದ್ದಲೂ ಇಂಗ್ಲಿಷ್ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.
ಆಗ ವಾಟಾಳ್ ನಾಗರಾಜ್, ಶ್ರೀರಾಮರೆಡ್ಡಿ ಸೇರಿದಂತೆ ಕನ್ನಡಪರ ಸಂಘಟನೆಗಳವರೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕೊನೆಗೆ ಸದನದಲ್ಲೇ ಜಮೀರ್ ಕ್ಷಮೆ ಯಾಚಿಸಿದ್ದರು.
ಇದೀಗ ಮತ್ತೆ ಅದೇ ರೀತಿ ಆಗಿದೆ.2005ರ ಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣ ಗೌಡ ಟ್ವಿಟ್ಟರ್ ನಲ್ಲಿ ಸ್ಮರಿಸಿದ್ದಾರೆ.
ಅಂದು ಜಮೀರ್ ನನ್ನಿಂದ ತಪ್ಪಾಗಿದೆ ಎಂದಿದ್ದರು. 18 ವರ್ಷ ಕಳೆದರೂ ಅವರು ಕನ್ನಡ ಕಲಿತಿಲ್ಲವೇ? ಅದೂ ಬೆಂಗಳೂರಿನಲ್ಲಿದ್ದುಕೊಂಡು ಎಂದು ನಾರಾಯಣ ಗೌಡ ಪ್ರಶ್ನೆ ಮಾಡಿದ್ದಾರೆ.

