ಸ್ಪೀಕರ್ ಹುದ್ದೆ: ಯುಟಿ ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು ಮಂಗಳವಾರ ಅಧಿಕೃತವಾಗಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕ ಅಜಯ್ ಸಿಂಗ್ ಅವರುಗಳ ಸಮ್ಮುಖದಲ್ಲಿ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದರು.

ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ಹಂಗಾಮಿ ಸ್ಪೀಕರ್ ವಿಶ್ರಾಂತಿಗೆ ಹೋದ ಸಂದರ್ಭದಲ್ಲಿ ಪೀಠದಲ್ಲಿ ಕೆಲ ಕಾಲ ಯು.ಟಿ ಖಾದರ್ ಕುಳಿತುಕೊಂಡಿದ್ದರು.

ಇದೀಗ ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ.