ಬೆಂಗಳೂರು: ಮೊದಲು ಫ್ರೀ ಎಂದು ಹೇಳಿ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯ ಸರ್ಕಾರ
ಗೈಡ್ ಲೈನ್ಸ್ ಮಾಡುವುದಾಗಿ ಹೇಳುತ್ತಿರುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್ ಡಿ ಕೆ,
ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಹರಿಹಾಯ್ದರು.
ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಫ್ರೀ ಫ್ರೀ ಅಂತಾ ಹೇಳುತ್ತಿದ್ದರು. ಈಗ ಗೈಡ್ ಲೈನ್ಸ್ ಮಾಡುತ್ತೇವೆ ಎನ್ನುತ್ತಾರೆ
ಮೊದಲ ಸಂಪುಟದಲ್ಲೇ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು. ಎದ್ದೇಳು ಕರ್ನಾಟಕ ಅಂತಾ ಹೇಳ್ತಿದ್ರಲ್ಲ, ಈಗ ಎದ್ದೇಳಿಸಿ ಎಂದು ವ್ಯಂಗ್ಯ ವಾಡಿದರು.
ಯಾವಾಗ ಕಾರ್ಯರೂಪಕ್ಕೆ ಬರುತ್ತೋ ಕಾದು ನೋಡೋಣ. ಕರೆಂಟ್ ಬಿಲ್ ಕಟ್ಟಬೇಡಿ ಅಂತಾ ನಾವೂ ಕೂಡಾ ರಾಜ್ಯದ ಜನತೆಗೆ ಕರೆ ಕೊಡುತ್ತೇವೆ ಎಂದು ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

