ರಿವರ್ಸ್ ಗೇರ್ ಸರ್ಕಾರ: ಬೊಮ್ಮಾಯಿ ಕಿಡಿ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ, ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಬಿಲ್ ಆದೇಶ ಪರಿಷ್ಕರಣೆ ಮಾಡುವುದಾಗಿ ಹೇಳಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಮಾಧ್ಯಮ ಪ್ರತನಿಧಿಗಳ ಜೊತೆ ಮಾತನಾಡಿದ ಬೊಮ್ಮಾಯಿ, ಎಲ್ಲವನ್ನೂ ಬದಲಾಯಿಸುತ್ತೇವೆ ಅನ್ನುವುದು ದುರಹಂಕಾರದ ಪರಮಾವಧಿ ಎಂದು ಟೀಕಿಸಿದರು.

ಇದು ರಿವರ್ಸ್ ಗೇರ್ ಸರ್ಕಾರ. ಗ್ಯಾರಂಟಿಯಲ್ಲೂ ಕಾಂಗ್ರೆಸ್ ಸರ್ಕಾರ ರಿವರ್ಸ್ ಹೋಗುತ್ತಿದೆ. ನಾವು ಮಾಡಿದ ಜನಪರ ಕಾನೂನಿನಲ್ಲಿ ರಿವರ್ಸ್ ಹೋಗುತ್ತಿದ್ದಾರೆ.

ಇದರ ಪರಿಣಾಮ ಜನರಿಗೆ ಕೂಡಲೇ ಗೊತ್ತಾಗಲಿದೆ, ರಿವರ್ಸ್ ಗೇರ್ ಸರ್ಕಾರ  ಸೇಡಿನ ಕ್ರಮ‌ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮತ್ತೊಮ್ಮೆ ಪಠ್ಯಪುಸ್ತಕ ಪರಿಷ್ಕರಣೆ  ಸಂಬಂಧ ಕಾಂಗ್ರೆಸ್ ​​ಸರ್ಕಾರ ಏನು ಮಾಡುತ್ತದೆ ನೋಡೋಣ, ಜನರಿಗೆ ಅನ್ಯಾಯವಾದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ‌ಬೊಮ್ಮಾಯಿ ಎಚ್ಚರಿಸಿದರು.