ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂ. 1ರಿಂದ ಹೋರಾಟ -ಪ್ರತಾಪ್ ಸಿಂಹ

ಮೈಸೂರು: ಒಂದು ವೇಳೆ ಗ್ಯಾರಂಟಿಗಳಿಗೆ ಷರತ್ತು‌ ವಿಧಿಸಿದರೆ ಜೂನ್  ಒಂದರಿಂದ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಸಂಸದ ಪ್ರತಸಪ್ ಸಿಂಹ ಕಾಂಗ್ರೆಸ್ ಸರ್ಕಾರಕ್ಕೆ‌ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನವರು ಕೊಟ್ಟ ಭರವಸೆಗಳನ್ನು ಮೊದಲು‌ ಈಡೇರಿಸಲಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದಾರೆ ಇದನ್ನು ಮೊದಲು ನಿಲ್ಲಿಸಲಿ ಸಿಎಂ ಸ್ಥಾನ ಸಿಗಬಹುದು ಇಲ್ಲದೆಯೂ ಇರಬಹುದು ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಹೇಳಿದ್ದಾರೆ.

ಮತದಾರರು ಕಾಂಗ್ರೆಸ್ ಮುಖ ನೋಡಿ ಮತ ಹಾಕಿಲ್ಲ.ಅವರು ನೀಡಿದ ಕ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಲಿ.

ಇನ್ನು ಗ್ಯಾರಂಟಿಗಳನ್ನು ಸಮನಾಗಿ ನೀಡಿ. ಒಂದು ವೇಳೆ ಷರತ್ತು ಹಾಕಿದರೆ ಜೂನ್ 1ರ ನಂತರ ಹೋರಾಟ ಶತಃಸಿದ್ದ ಎಂದರು.

ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ತನಿಖೆಗೆ ಆದೇಶಿ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಪ್ರತಾಪ್ ಸಿಂಹ ಸವಾಲು ಹಾಕಿದರು.

ಇನ್ನು ಮೈಸೂರು ನನ್ನ ಕ್ಷೇತ್ರ. ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಬಳಿ ಬೇಕಾದರೂ ಹೋಗುತ್ತೇನೆ. ಕೊಡಗು ಮತ್ತು ಮೈಸೂರು ಅಭಿವೃದ್ಧಿಗಾಗಿ ಯಾರ ಕೈಕಾಲು ಬೇಕಾದರೂ ಹಿಡಿಯುತ್ತೇನೆ.

ಚುನಾವಣೆ ಬಂದಾಗ ಅಷ್ಟೇ ರಾಜಕಾರಣ ಮಾಡಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು. ಅಭಿವೃದ್ಧಿ ವಿಚಾರವಾಗಿ ನಾನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮನೆಗೆ ಹೋಗುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದರು.