ನೆಹರು ಕೈಲಿ ಆಗದ್ದು‌ ಪ್ರಿಯಾಂಕ್ ಖರ್ಗೆಯಿಂದ‌ ಆಗುತ್ತಾ: ಚನ್ನಬಸಪ್ಪ ಟಾಂಗ್

ಶಿವಮೊಗ್ಗ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಂದಲೇ ಭಜರಂಗದಳ,ಆರ್ ಎಸ್ ಎಸ್ ಸಂಘಟನೆ ನಿಷೇಧಿಸಲು  ಆಗಲಿಲ್ಲ, ಇನ್ನು ಸಚಿವ ಪ್ರಿಯಾಂಕ್​​ ಖರ್ಗೆ ಅವರಿಂದ ಸಾಧ್ಯವೆ ಎಂದು ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಮಾಧ್ಯಮ ‌ಪ್ರತಿನಿಧಿಗಳ ಜತೆ ಮಾತನಾಡಿದ ಅವರು,ಮನೆ ಮನೆಯಲ್ಲಿ ಹಿಂದುತ್ವ ಮತ್ತು ಆರ್​​ಎಸ್​​ಎಸ್ ಬೆರೆತು ಹೋಗಿದೆ. ಪ್ರಿಯಾಂಕ್​ ಖರ್ಗೆ ಇಂತಹ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ  ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅಶ್ವತ್  ನಾರಾಯಣ್ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲು ಮಾಡಿದ್ದಾರೆ ಎಂದು ಚನ್ನಬಸಪ್ಪ ಕಿಡಿ ಕಾರಿದರು.