ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡದಿದ್ದರೇ ಹೋರಾಟ ಮಾಡುತ್ತೇವೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ರಾಮಲಿಂಗರೆಡ್ಡಿ, ಪ್ರತಾಪ್ ಸಿಂಹ ಪ್ರತಿಭಟನೆ ಮಾಡುವ ಅಗತ್ಯವಿಲ್ಲ ನಾವು ಕೊಟ್ಟಿರುವ ಭರವಸೆಗಳನ್ನ ಈಡೇರಿಸುತ್ತೇವೆ ಎಂದು ಟಾಂಗ್ ನೀಡಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ 600 ಭರವಸೆ ನೀಡಿತ್ತು. 600 ಭರವಸೆಯಲ್ಲಿ ಕೇವಲ 60 ಭರವಸೆ ಈಡೇರಿಸಿತ್ತು. ಮೋದಿ ಅವರು ದೇಶದ ಎಲ್ಲರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಹೇಳಿದ್ದರು. ಹಾಗಾದರೆ ಎಲ್ಲರ ಖಾತೆಗೂ ಹಣ ಹಾಕಿದ್ರಾ
ನಮಗೆ ಹೇಳುವ ಮೊದಲು ನಿಮ್ಮ ಬಗ್ಗೆ ನೋಡಿಕೊಳ್ಳಿ ಎಂದು ಟಾಂಗ್ ನೀಡಿದರು.
ಕರೆಂಟ್ ಬಿಲ್ ಕಟ್ಟದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಎಲ್ಲಾ ಮಾಹಿತಿಗಳನ್ನ ಪಡೆಯುತ್ತಿದ್ದೇವೆ, ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.ಸಚಿವ ಸಂಪುಟ ವಿಸ್ತರಣೆಯಾಗುತ್ತದೆ, ಶೇ.99ರಷ್ಟು ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಸಚಿವರು ತಿಳಿಸಿದರು.

