ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಹಿರಿಯ ರಾಜಕಾರಣಿ, ಗದಗ ಶಾಸಕ ಹೆಚ್.ಕೆ ಪಾಟೀಲ್,ನಾಗಮಂಗಲ ಶಾಸಕ ಎನ್. ಚಲುವರಾಯಸ್ವಾಮಿ ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್,ಬಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬ್ಯಾಟರಾಯನಪುರ ಶಾಸಕ ಕೃಷ್ಣಬೈರೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಟಿ.ನರಸೀಪುರ ಶಾಸಕ, ಹಿರಿಯ ರಾಜಕಾರಣಿ ಡಾ.ಹೆಚ್. ಸಿ.ಮಹದೇವಪ್ಪ ಅವರು ಸತ್ಯ ಮತ್ತು ನಿಷ್ಠೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮಧುಗಿರಿ ಶಾಸಕ ಕೆಎನ್ ರಾಜಣ್ಣ ಅವರು ಬುದ್ಧ, ಬಸವ, ಅಂಬೇಡ್ಕರ್ ಮತ್ತು ವಾಲ್ಮೀಕಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಗಾಂಧಿ ನಗರ ಶಾಸಕ ದಿನೇಶ್ ಗುಂಡೂರಾವ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಭಟ್ಕಳ ಶಾಸಕ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರು ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಅವರು ಇಂಗ್ಲಿಷ್ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಹಿರಿಯೂರು ಶಾಸಕ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕಲಘಟಗಿ ಶಾಸಕ ಸಂತೋಷ್ ಲಾಡ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಶಾಸಕರೂ ಅಲ್ಲದ, ಎಂಎಲ್ ಸಿಯೂ ಅಲ್ಲದ ಎನ್. ಎಸ್.ಬೋಸರಾಜು ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

